ಬೆಂಗಳೂರು: ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. ಮಾನವರಲ್ಲಿ ಮನುಷ್ಯತ್ವ ಬೆಳೆದು ಪ್ರೀತಿ ವಿಶ್ವಾಸ ಹೆಚ್ಚಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು(ಜೂ.17) ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದು ಹೇಳಿದರು.
ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ, ಸಮಾಜ ಹಾಗೂ ಎಲ್ಲಾ ಧರ್ಮಗಳೂ ಏಳಿಗೆಯಾಗುತ್ತವೆ. ನಮ್ಮದು ಸರ್ವಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ. ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಈ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…