ಬೆಂಗಳೂರು : ಮುಂಬರುವ ಶುಕ್ರವಾರ ಶಿವರಾತ್ರಿಯಂದು ರಾಮೇಶ್ವರಂ ಕೆಫೆ ಮತ್ತೆ ಲಾಂಚ್ ಮಾಡೋಣ ಎಂದು ಕೆಫೆ ಮಾಲೀಕರಾದ ರಾಘವೇಂದ್ರ ರಾವ್ ತಿಳಿಸಿದ್ದಾರೆ.
ನೆನ್ನೆ ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಈ ವಿಚಾರದ ಕುರಿತು ಮಾಲೀಕರಾದ ರಾಘವೇಂದ್ರ ರಾವ್ ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪ್ರಾರಂಭದ ಹಂತದಿಂದಲೂ ಒಂದಲ್ಲಾ ಒಂದು ಕಷ್ಟಗಳು ಎದುರಾಗಿದೆ. ಆದರೆ ಅದನ್ನೆಲ್ಲ ಮೆಟ್ಟಿಲುಗಳನ್ನಾಗಿಸಿಕೊಂಡು ಈ ಹಂತಕ್ಕೆ ಬಂದು ತಲುಪಿದ್ದೇವೆ ಎಂದರು.
ಇನ್ನು ಮುಂದಕ್ಕೆ ಯಾರ್ಯಾರು ಬರುತ್ತಾರೆ ನೋಡೋಣ ಎಲ್ಲವನ್ನು ಎದುರಿಸೋಣ. ನಮಗೆ ಕನ್ನಡಿಗರೆಲ್ಲರ ಬೆಂಬಲವಿರಲಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಸೇರಿದಂತೆ ಎಲ್ಲಾ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಮಾಧ್ಯಮದವರು ಈ ಸಂದರ್ಭದಲ್ಲಿ ನಮ್ಮ ಜೊತೆ ನಿಂತಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಬರುವ ಶುಕ್ರವಾರ ಶಿವರಾತ್ರಿ ದಿನದಂದು ಇದೇ ಜಾಗದಲ್ಲಿ ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕೆಫೆ ಪ್ರಾರಂಭ ಮಾಡೋಣ. ಅದಕ್ಕೆ ನೀವೆಲ್ಲರೂ ಬಂದು ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…