ಮೈಸೂರು : ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಮುರುಘಾ ಶ್ರೀ ವಿರುದ್ದ ನೇರವಾಗಿ ಪ್ರಧಾನಿ, ರಾಷ್ಟ್ರಪತಿಗೆ ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯರು ತಮಗೆ ನ್ಯಾಯ ದೊರಕಿಸಿಕೊಡುವಲ್ಲಿ ನೆರವಾಗುವಂತೆ ಕೋರಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ತಮಗಾದ ದೌರ್ಜನ್ಯದ ಬಗ್ಗೆ ವಿವರಿಸಿ, ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಂತ್ರಸ್ತ ಬಾಲಕಿಯರು ಪತ್ರ ಬರೆದಿದ್ದಾರೆ. ಪ್ರಧಾನಿ ಮತ್ತು ರಾಷ್ಟ್ರಪತಿ ತಮ್ಮ ನೋವಿಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸದಲ್ಲಿ ಬಾಲಕಿಯರು ಮನವಿ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.