ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂತಹ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ಸೂಚನೆ ಸರಿಯಿಲ್ಲ ಎಂದು ಕಿಡಿಕಾರಿದರು.
ಗಣೇಶ ಹಬ್ಬದ ವೇಳೆ ರಾಜ್ಯ ಹಾಗೂ ದೇಶಾದ್ಯಂತ ಬಹಳ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಹಾರ ಸುರಕ್ಷತಾ ಕ್ರಮ ಕೈಗೊಳ್ಳುವುದು ಸರಿ. ಆದರೆ ಹೀಗೆ ಹುಚ್ಚರ ರೀತಿ ಎಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ರಾಜ್ಯ ಸರ್ಕಾರ ಇಂತಹ ಆದೇಶ ಹೊರಡಿಸಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಇದಕ್ಕೆ ಕಿವಿಗೊಡಬೇಕಿಲ್ಲ ಎಂದು ಕಿವಿಮಾತು ಹೇಳಿದರು.
ಎಲ್ಲಾದರೂ ದುರುದ್ದೇಶದಿಂದ ಪ್ರಸಾದದಲ್ಲಿ ವಿಷ ಬೆರೆಸುವಂತ ಪ್ರಕರಣ ನಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಿ. ಆದರೆ ಸರ್ಕಾರವೇ ಹೀಗೆ ದುರುದ್ದೇಶ ಇಟ್ಟುಕೊಂಡು ಆದೇಶ ಹೊರಡಿಸಿದರೆ ಹೇಗೆ ಎಂದು ಪ್ರಶ್ನೆ ಮಾಡಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…