ರಾಜ್ಯ

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ಸಿಎಂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಪರಿಶೀಲನೆ ಮಾಡಿ, ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಆ ಮೂಲಕ ಸರ್ಕಾರವು ಅರ್ಹರಿಗೆ ಮಾತ್ರ ಗೃಹಲಕ್ಷ್ಮೀ ಹಣ ಪಾವತಿ ಖಚಿತಪಡಿಸಲು ಮುಂದಾಗಿದೆ.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಲ್ಲಿ ಮರಣ ಹೊಂದಿರುವವರ ಮಾಹಿತಿಯನ್ನು ಕಾಲ-ಕಾಲಕ್ಕೆ ಪರಿಶೀಲನೆ ನಡೆಸಿ, ಮರಣ ಹೊಂದಿರುವ ಫಲಾನುಭವಿಗಳಗೆ ಧನಸಹಾಯ ಪಾವತಿಯಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲು ಸರ್ಕಾರ ಯೋಚಿಸಿದೆ. ಗೃಹಲಕ್ಷ್ಮೀ ಯೋಜನೆಯಡಿ ಪಾವತಿಯಾಗುವ ಮೊತ್ತವು ಮರಣ ಹೊಂದಿರುವ ಫಲಾನುಭವಿಗಳಿಗೆ ಕೆಲವು ಕಡೆ ಪಾವತಿಯಾಗುವುದನ್ನು ತಡೆಗಟ್ಟುವುದು ಅವಶ್ಯವಾಗಿದೆ. ಇದರಿಂದ ಸರ್ಕಾರ ಪಾವತಿಸುವ ಮೊತ್ತವು ಸದ್ವಿನಿಯೋಗವಾಗಲು ಹಾಗೂ ಸರ್ಕಾರದ ಹಣ ಇತರೆ ಅರ್ಹ ಫಲಾನುಭವಿಗಳಿಗೆ ವಿತರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ವಹಿಸಬೇಕು ಎಂದು ಎಂಎಲ್ಸಿ ದಿನೇಶ್ ಗೂಳಿಗೌಡ ಮನವಿ ಮಾಡಿದ್ದರು.

ಮನವಿ ಪತ್ರದಲ್ಲೇನಿತ್ತು?:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯಡಿ 2023ರ ಜೂನ್ ತಿಂಗಳಿನಿಂದ ಸರ್ಕಾರದ ಆದೇಶದನ್ವಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಾಸಿಕ 2 ಸಾವಿರ ರೂ. ಪಾವತಿಸಲಾಗುತ್ತಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಯೋಜನೆಯ ಫಲಾನುಭವಿ ಆಗಿರುತ್ತಾರೆ. ಗೃಹಲಕ್ಷ್ಮೀ ಯೋಜನೆಯಡಿ 1,24,12,543 ಅರ್ಹ ಫಲಾನುಭವಿಗಳಿಗೆ ಈವರೆಗೂ ಸುಮಾರು 57,300 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಪಾವತಿ ಮಾಡಲಾಗಿದೆ ಎಂದಿದ್ದಾರೆ.

ನಿವೃತ್ತ ಸರ್ಕಾರಿ ನೌಕರರುಗಳಿಗೆ ಪಾವತಿಸುವ ಪಿಂಚಣಿ ಮೊತ್ತವನ್ನು ಪಡೆಯಲು ಅವರು ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್?ಗಳಿಗೆ ತಮ್ಮ ಜೀವಿತ ಪ್ರಮಾಣ ಸಲ್ಲಿಸುವುದನ್ನು ಕಡ್ಡಾಯಗೊಳಿಸಿರುವ ಮಾದರಿಯಲ್ಲಿ, ಗೃಹಲಕ್ಷ್ಮೀ ಯೋಜನೆಯಡಿಯ ಅರ್ಹ ಫಲಾನುಭವಿಗಳು ಸಹ ಪ್ರತಿ ವರ್ಷ ಸಂಬಂಧಪಟ್ಟ ಬ್ಯಾಂಕ್’ಗಳಿಗೆ ತಮ್ಮ ಜೀವಿತ ಪ್ರಮಾಣ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಹಾಗೂ ಇತರೆ ಮಾರ್ಗೋಪಾಯಗಳ ಬಗ್ಗೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

25 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

1 hour ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

2 hours ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

2 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

3 hours ago