ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ, ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ನೋಟಿಸ್ ಜಾರಿ ಮಾಡಲಾಗಿದೆ.
ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದರು.
ಘಟನೆ ನಡೆಯುತ್ತಿದ್ದಂತೆ ರಾಜೀವ್ ಗೌಡ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ರಾಜೀವ್ ಗೌಡ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ತಲೆಮರೆಸಿಕೊಂಡು ನಾಪತ್ತೆಯಾಗಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜೀವ್ ಗೌಡ ಅವರನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚನೆ ಮಾಡಿದ್ದು, ಅವರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
ರಾಜೀವ್ ಗೌಡ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಕೆಪಿಸಿಸಿ, ರಾಜೀವ್ ಗೌಡಗೆ ನೋಟಿಸ್ ಜಾರಿ ಮಾಡಿದೆ.
ಈ ಬಗ್ಗೆ ಒಂದು ವಾರದೊಳಗೆ ಸೂಕ್ತ ಕಾರಣ ನೀಡಿ ಉತ್ತರಿಸಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ದಾವಣಗೆರೆ: ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ.…
ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ…
ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…
ಜನನಾಯಗನ್ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಸೆನ್ಸಾರ್…
ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ…