ರಾಜ್ಯ

ಮಾರಣಾಂತಿಕ ರೋಗ| ದಯಾ ಮರಣಕ್ಕೆ ಆರೋಗ್ಯ ಇಲಾಖೆ ಅವಕಾಶ

ಬೆಂಗಳೂರು: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ತೀವ್ರ ಅನಾರೋಗ್ಯಕ್ಕೊಳಗಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಚೇತರಿಕೆಯ ಭರವಸೆ ಇಲ್ಲದೆ ಮಾರಕ ಆರೋಗ್ಯದಿಂದ ಬಳಲುತ್ತಿರುವವರಿಗೆ ಅಥವಾ ನಿರಂತರ ಕೋಮಾ ಸ್ಥಿತಿಯಲ್ಲಿರುವವರು ಯಾವುದೇ ಚಿಕಿತ್ಸೆ ನೀಡಿದರೂ ಬದುಕಲ್ಲ ಎಂಬ ರೋಗಿಗಳಿಗೆ ಈ ಆದೇಶದಿಂದ
ಅವರು ಘನತೆಯಿಂದ ಸಾವನ್ನಪ್ಪಲು ಅವಕಾಶ ಸಿಕ್ಕಂತಾಗುತ್ತದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್‌, ರೋಗಿಯು ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂಕೋರ್ಟ್‌ ನಿರ್ದೆಶವನ್ನು ಜಾರಿಗೆ ತರಲು ಐತಿಹಾಸಿಕ ಆದೇಶ ಹೊರಡಿಸಿದ್ದೇವೆ. ಇದು ಚೇತರಿಕೆಯ ಭರವಸೆ ಇಲ್ಲದ ಮಾರಕ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮುಂದೆ ಜೀವ ಉಳಿಸುವ ಚಿಕಿತ್ಸೆಯಿಂದ ಪ್ರಯೋಜನ ಆಗಲ್ಲ ಎಂಬುದನ್ನು ದೃಢೀಕರಿಸಿದ ನಂತರ ಘನತೆಯಿಂದ ಸಾಯುವ ಅವಕಾಶವನ್ನು ಈ ಕಾನೂನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಪ್ರಗತಿಪರ ರಾಜ್ಯವಾಗಿದ್ದು, ನ್ಯಾಯಯುತ ಸಮಾಜಕ್ಕಾಗಿ ಉದಾರ ಮತ್ತು ಸಮಾನ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ರೋಗಿಯು ಘನತೆಯಿಂದ ಸಾಯುವ ಹಕ್ಕಿನ ಸಂಬಂಧ ಜಿಲ್ಲಾ ಮಟ್ಟದಲ್ಲಿ ತಜ್ಞ ವೈದ್ಯರನ್ನೊಳಗೊಂಡ ಸಮಿತಿ ರಚಿಸಲಾಗುತ್ತದೆ. ಈ ಸಮಿತಿ ರೋಗಿಗೆ ಯಾವುದೇ ಚಿಕಿತ್ಸೆ ನೀಡಿದರೂ ಬದುಕುಳಿಯಲ್ಲ ಎಂದು ದೃಢಪಡಿಸಿದ ನಂತರ ಘನತೆಯಿಂದ ಸಾಯಲು ಅವಕಾಶ ಕೊಡುವ ನಿರ್ಧಾರ ಕೈಗೊಳ್ಳುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಒಬ್ಬ ರೋಗಿಯು ಗಂಭೀರ ಕಾಯಿಲೆ ಅಸ್ವಸ್ಥನಾಗಿ ಚೇತರಿಕೆ ಅಥವಾ ಗುಣಮುಖ ಆಶಾಭಾವನೆ ಹೊಂದಿಲ್ಲದೆ ಸುದೀರ್ಘ ಚಿಕಿತ್ಸೆ ಪಡೆಯುತ್ತಿದ್ದರೆ ಹಾಗೂ ಯಾವುದೇ ಚೇತರಿಕೆ ಸಾಮರ್ಥ್ಯ ಹೊಂದಿರದ ಸಂದರ್ಭದಲ್ಲಿ ನಿಗದಿಯ ಕಾರ್ಯ-ಪೂರಕವಾಗಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು ಈಗ ರಾಜ್ಯ ಸರ್ಕಾರ ಈ ನಿರ್ದೇಶನ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಸಚಿವ ಈಶ್ವರ್‌ ಖಂಡ್ರೆ ಭರವಸೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…

2 mins ago

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…

22 mins ago

ಮತಾಂತರಗೊಂಡರೆ ಎಸ್‌.ಸಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…

33 mins ago

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

2 hours ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

2 hours ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

2 hours ago