Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ರಾಜ್ಯ ರೈಲ್ವೆ ಯೋಜನೆಗೆ ಜೀವಕಳೆ

ನವದೆಹಲಿ: ಉಕ್ಕು ಮತ್ತು ಭಾರೀ ಕೈಗಾರಿಗೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.19) ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಕೇಂದ್ರ ರೈಲ್ವೆ ಸಚಿವರನ್ನು, ರೈಲ್ವೆ ಭವನದಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಹಾಗೂ ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ರೈಲ್ವೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು ಎಂದು ಕುಮಾರಸ್ವಾಮಿ ಹೇಳಿದರು.

ಅಲ್ಲದೆ; ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರಿಗೆ ಕುಮಾರಸ್ವಾಮಿ ಮನವಿ ಮಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕುಮಾರಸ್ವಾಮಿ ಹೇಳಿದರು.

Tags:
error: Content is protected !!