ಗೋಕರ್ಣ : ಗೋಕರ್ಣದ ಮುಖ್ಯ ಕಡಲತೀರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ ಋತುರಾಜ್, ಗುಪ್ತಾ ಪ್ರಶಾಂತ್ ಚಂದ್ರಶೇಖರ್, ಆರುಷಿ ಬನ್ಸಾಲ್, ರೀತು ಎಂಬುವರನ್ನು ರಕ್ಷಿಸಲಾಗಿದೆ.
ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುತ್ತಿದ್ದರು. ಇದನ್ನು ನೋಡಿದ ಲೈಫ್ಗಾರ್ಡ್ ಸಿಬ್ಬಂದಿ ಮುಳುಗುತ್ತಿದ್ದ ಐವರು ಪ್ರವಾಸಿಗರನ್ನು ರಕ್ಷಣ ಮಾಡಿದ್ದು, ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ಮಾಹಿತಿ ಪಡೆದುಕೊಂಡರು.