ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಎಂಎಸ್ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ “15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.
ಎಂಎಸ್ ಸತ್ಯು ನಿರ್ದೇಶನದ ಹಿಂದಿ ಚಿತ್ರ ಗರಂ ಹಲವಾರು ರಾಷ್ಟ್ರೀಯ – ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು.
ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ.
“ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…