Mysore
30
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ದೇವಾಲಯಗಳಿಗೆ ದೀಪಾಲಂಕಾರ ಮಾಡಿ: ಸರ್ಕಾರ ಸುತ್ತೋಲೆ

ಬೆಂಗಳೂರು : ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಸರ್ಕಾರ ಪ್ರತಿ ಜಿಲ್ಲೆಗಳು ಹಾಗೂ ತಾಲೂಕಿಗೆ ಅನುದಾನ ಬಿಡುಗಡೆ ಮಾಡಿದೆ.

75ನೇ ಗಣರಾಜ್ಯೋತ್ಸವದ ಹಿನ್ನೆಲೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜನವರಿ 25 ಮತ್ತು 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ.

ಜನವರಿ 26ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಸುತ್ತೋಲೆ ಹೊರಡಿಸಿದೆ.

ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸುವ ಸಂಬಂಧ 30 ಜಿಲ್ಲೆಗಳಲ್ಲಿ, ಪ್ರತಿ ಜಿಲ್ಲೆಗೆ ರೂ.1,00,000/- (ರೂಪಾಯಿ ಒಂದು ಲಕ್ಷ ಮಾತ್ರ)ರಂತೆ ಒಟ್ಟು ರೂ.30,00,000/- (ರೂಪಾಯಿ ಮೂವತ್ತು ಲಕ್ಷಗಳು ಮಾತ್ರ) ಮೊತ್ತವನ್ನು ಹಾಗೂ 31 ಜಿಲ್ಲೆಗಳಲ್ಲಿನ 232 ತಾಲ್ಲೂಕುಗಳಲ್ಲಿ, ಪ್ರತಿ ತಾಲ್ಲೂಕಿಗೆ ರೂ.20,000/- (ರೂಪಾಯಿ ಇಪ್ಪತ್ತು ಸಾವಿರಗಳು ಮಾತ್ರ)ರಂತೆ ಒಟ್ಟು ರೂ.46,40,000/- (ರೂಪಾಯಿ ನಲವತ್ತಾರು ಲಕ್ಷ ನಲ್ವತ್ತು ಸಾವಿರಗಳು ಮಾತ್ರ) ಮೊತ್ತವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ