ಬೆಂಗಳೂರು: ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲು ಮದ್ಯ ಉತ್ಪಾದಕರು ತಕರಾರು ಎತ್ತಿರುವ ಕಾರಣದಿಂದ ಮದ್ಯದ ದರಗಳ ಇಳಿಕೆ ಪ್ರಕ್ರಿಯೆಯನ್ನು ಅಬಕಾರಿ ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ.
ಹೆಚ್ಚುವರಿ ಅಬಕಾರಿ ಸುಂಕ ಇಳಿಕೆ ಮತ್ತು ಇತರ ರಾಜ್ಯಗಳಿಗೆ ಸಮನಾಗಿ ಮದ್ಯದ ಘೋಷಿತ ದರ ನಿಗದಿಪಡಿಸುವ ಮೂಲಕ ದರ ಇಳಿಕೆಗೆ ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆ ಎರಡು ಕರಡು ಅಧಿಸೂಚನೆಗಳನ್ನು ಹೊರಡಿಸಿತ್ತು.
ವಿವಿಧ ರಾಜ್ಯಗಳಿಗೆ ಕಡಿಮೆ ಮೊತ್ತದ ಘೋಷಿತ ದರ ನಿಗದಿಪಡಿಸಿರುವ ಮದ್ಯ ಉತ್ಪಾದನಾ ಕಂಪನಿಗಳು, ಕರ್ನಾಟಕದಲ್ಲಿ ಹೆಚ್ಚಿನ ಮೊತ್ತದ ಘೋಷಿತ ದರ ನಿಗದಿಪಡಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಲೆಕ್ಕಪರಿಶೋಧಕರು ಮತ್ತು ವೆಚ್ಚ ಪರಿಶೋಧಕರ ಪ್ರಮಾಣಪತ್ರಗಳೊಂದಿಗೆ ಪ್ರತಿ ಬ್ರಾಂಡ್ ಮದ್ಯದ ಉತ್ಪಾದನಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳುವುದನ್ನು ಕಡ್ಡಾಯಗೊಳಿಸಲು ಇಲಾಖೆ ಮುಂದಾಗಿತ್ತು.
ಹೆಚ್ಚುವರಿ ಅಬಕಾರಿ ತೆರಿಗೆ ಇಳಿಸುವುದು ಸರ್ಕಾರದ ನಿರ್ಧಾರ. ಆದರೆ, ಉತ್ಪಾದನಾ ವೆಚ್ಚದ ಮಾಹಿತಿ ಹಂಚಿಕೊಳ್ಳಲಾಗದು ಎಂದು ಹಲವು ಉತ್ಪಾದಕರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರಿಂದ ಭವಿಷ್ಯದಲ್ಲಿ ಕಾನೂನು ತೊಡಕುಂಟಾಗುವ ಸಾಧ್ಯತೆಯಿದೆ. ಆ ಬಗ್ಗೆ ಮತ್ತಷ್ಟು ಪರಿಶೀಲಿಸಲು ದರ ಇಳಿಕೆಯ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…