Mysore
25
few clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

ಮದ್ಯದ ದರ ಏರಿಕೆ ಶಾಕ್‌: ದುಬಾರಿಯಾಯ್ತು ಬಡವರ ಫೇವರೆಟ್ ಬ್ರ್ಯಾಂಡ್

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆ‌ಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ‌ ಕೆಲ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.

ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್​ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ‌‌‌ ಕಂಪನಿಗಳು ಕ್ವಾಟರ್​ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.

ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್​ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್​ಗಳ ದರ ಏರಿಕೆಯಾಗಿದೆ.

ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!