ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಬರೋಬ್ಬರಿ 193 ಕೋಟಿ ಆದಾಯ ಗಳಿಕೆ ಕಂಡು ಮಂದಹಾಸ ಬೀರಿದೆ. ಇದರ ಬೆನ್ನಲ್ಲೆ ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.
ಇಂದಿನಿಂದ (ಜನವರಿ ೨) ಬಡವರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ. ಅಬಕಾರಿ ಇಲಾಖೆ ಬಡವರ ನೆಚ್ಚಿನ ಕೆಲ ಬ್ರ್ಯಾಂಡ್ಗಳ ದರ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಕಂಠ ಪೂರ್ತಿ ಕುಡಿದು ಕುಪ್ಪಳಿಸಿದ್ದ ಬಡವರು ಈಗ ಎಣ್ಣೆ ಖರೀದಿಸಲು ಯೋಚಿಸುವಂತಾಗಿದೆ.
ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್ಗಳ ದರ ಹೆಚ್ಚಳ ಮಾಡಲಾಗಿದೆ. ಮದ್ಯ ಉತ್ವಾದನ ಕಂಪನಿಗಳು ಕ್ವಾಟರ್ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿವೆ. ಉತ್ಪಾದನ ವೆಚ್ಚ ಅಧಿಕವಾಗಿದೆ ಎಂದು ಮದ್ಯ ಉತ್ವನ್ನ ಕಂಪನಿಗಳು ಸಮಜಾಯಿಸಿ ನೀಡಿವೆ.
ಇಂದಿನಿಂದ ರಾಜ್ಯಾದ್ಯಂತ ಬಡವರ ಈ ಮೂರು ಫೇವರೆಟ್ ಬ್ರ್ಯಾಂಡ್ಗಳ ಮೇಲಿನ ದರ ಹೆಚ್ಚಳವಾಗಿದೆ. ಈಗಾಗಲೇ ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಸಂದೇಶ ಕಳುಹಿಸಿವೆ. ರಾಜ್ಯದ ಕೆಳ ವರ್ಗದ ಜನ ಅತಿ ಹೆಚ್ಚು ಸೇವಿಸುವ ಬ್ರ್ಯಾಂಡ್ಗಳ ದರ ಏರಿಕೆಯಾಗಿದೆ.
ಸದ್ಯ ಮದ್ಯ ಏರಿಕೆ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಕಂಪನಿಗಳ ವಿರುದ್ಧ ಮದ್ಯ ಪ್ರಿಯರು ಆಕ್ರೋಶ ಹೊರ ಹಾಕಿದ್ದಾರೆ. ಆದರೆ ಇನ್ನು ಮತ್ತೊಂದೆಡೆ ಹೀಗೆ ರೇಟ್ ಹೆಚ್ಚಳವಾದ್ರೆ ಮದ್ಯ ಮಾರಾಟದಲ್ಲಿ ಕುಸಿತ ಆಗುತ್ತೆ ಎಂದು ಬಾರ್ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪರಿಷ್ಟೃತ ದರ
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8PM(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ
ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…