ಫೆಬ್ರವರಿ 14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ – 2024ರ ಹಿನ್ನೆಲೆಯಲ್ಲಿ ಚುನಾವಣೆಯು ಮುಕ್ತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಕರ್ನಾಟಕ ಅಬಕಾರಿ ಅಬಕಾರಿ ( ಸನ್ನದುಗಳ ಸಾಮಾನ್ಯ ಷರತ್ತುಗಳು ) ನಿಯಮಗಳು 1967ರ ನಿಯಮ 10(ಬಿ)ರ ಅನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135 (ಸಿ)ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಪ್ರಯುಕ್ತ ಫೆಬ್ರವರಿ 14ರ ಸಂಜೆ 5 ಗಂಟೆಯಿಂದ ಫೆಬ್ರವರಿ 17ರ ಬೆಳಗ್ಗೆ 6 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ( ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ) ಪಾನನಿರೋಧ ದಿನವನ್ನು ಜಾರಿಗೊಳಿಸಲಾಗಿದೆ. ಆದ್ದರಿಂದ ಜಿಲ್ಲೆಯಾದ್ಯಂತ ಮದ್ಯದ ವಹಿವಾಟನ್ನು ನಿಷೇಧಿಸಿ ಶುಷ್ಕ ದಿನಗಳೆಂದು ಘೋಷಣೆ ಮಾಡಲಾಗಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಫೆಬ್ರವರಿ 16ರಂದು ಉಪ ಚುನಾವಣೆ ನಡೆಯಲಿದ್ದು, ಜನವರಿ 16ರಿಂದ ಫೆಬ್ರವರಿ 23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.





