ರಾಜ್ಯ

ಫೆಬ್ರವರಿ 14ರಿಂದ 3 ದಿನಗಳ ಕಾಲ ಮದ್ಯಮಾರಾಟ ನಿಷೇಧ: ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ

ಫೆಬ್ರವರಿ 14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ – 2024ರ ಹಿನ್ನೆಲೆಯಲ್ಲಿ ಚುನಾವಣೆಯು ಮುಕ್ತವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಕರ್ನಾಟಕ ಅಬಕಾರಿ ಅಬಕಾರಿ ( ಸನ್ನದುಗಳ ಸಾಮಾನ್ಯ ಷರತ್ತುಗಳು ) ನಿಯಮಗಳು 1967ರ ನಿಯಮ 10(ಬಿ)ರ ಅನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್‌ 135 (ಸಿ)ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಪ್ರಯುಕ್ತ ಫೆಬ್ರವರಿ 14ರ ಸಂಜೆ 5 ಗಂಟೆಯಿಂದ ಫೆಬ್ರವರಿ 17ರ ಬೆಳಗ್ಗೆ 6 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ( ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯನ್ನು ಹೊರತುಪಡಿಸಿ ) ಪಾನನಿರೋಧ ದಿನವನ್ನು ಜಾರಿಗೊಳಿಸಲಾಗಿದೆ. ಆದ್ದರಿಂದ ಜಿಲ್ಲೆಯಾದ್ಯಂತ ಮದ್ಯದ ವಹಿವಾಟನ್ನು ನಿಷೇಧಿಸಿ ಶುಷ್ಕ ದಿನಗಳೆಂದು ಘೋಷಣೆ ಮಾಡಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಫೆಬ್ರವರಿ 16ರಂದು ಉಪ ಚುನಾವಣೆ ನಡೆಯಲಿದ್ದು, ಜನವರಿ 16ರಿಂದ ಫೆಬ್ರವರಿ 23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.

andolana

Recent Posts

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

22 mins ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

29 mins ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

34 mins ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

36 mins ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

38 mins ago

ಸರ್ವಜನ ಹಿತಕಾರಿ ಬಜೆಟ್

ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ  ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…

44 mins ago