ಬೆಂಗಳೂರು: ವಿವಿಧ ನಿಗಮ, ಮಂಡಳಿಗೆ ಆಯ್ಕೆ ಮಾಡಬೇಕಿರುವ ಸದಸ್ಯರ ಅಂತಿಮ ಪಟ್ಟಿಯನ್ನು ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಇಂದು (ಜ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ ಪಟ್ಟಿ ಸಿದ್ದವಾಗಬೇಕಿದೆ. ಕೆಪಿಸಿಸಿ ಅಧ್ಯಕ್ಷರು ಪಟ್ಟಿಯನ್ನು ಸಿದ್ದಪಡಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನ ಮಾಡುವುದಕ್ಕೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಅಧಿಕಾರ ನೀಡಿದೆ. ಹೈಕಮಾಂಡ್ ಜೊತೆ ಚರ್ಚೆ ನಂತರ ಅಂತಿಮ ಪಟ್ಟಿ ಸಿದ್ದವಾಗಲಿದೆ ಎಂದು ತಿಳಿಸಿದರು.
ನಿಗಮ, ಮಂಡಳಿಗೆ ನಾಮನಿರ್ದೇಶನಕ್ಕೆ ಯಾರ ಹೆಸರು ಆಯ್ಕೆ ಮಾಡಬೇಕು ಎಂಬ ಬಗ್ಗೆ ಶಿಫಾರಸ್ಸು ಮಾಡಲು ಪರಮೇಶ್ವರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.