ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ.
ಈ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು. ಆರು ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ.
ಮಹಿಳಾ ಹಾಗೂ ಮಕ್ಕಳ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಹೆಚ್ಚು ಕಂಡೀಷನ್‌ಗಳನ್ನು ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲು ಉದ್ದೇಶಿಸಲಾಗಿದೆ. ಇದರ ಜೊತೆಗೆ ಆರೋಗ್ಯ ವಿಮೆಯನ್ನು ನೀಡುವ ಯೋಚನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.





