ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ತಿಳಿಸಿದರು.
ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಮಾತ್ರ ಇವಿಎಂ ಮಾಡಿದ್ದೇವೆ. ಬ್ಯಾಲೆಟ್ ಪೇಪರ್‌ನಲ್ಲಿ ಮಾಡಬಾರದು ಅಂತೇನಿಲ್ಲ. ಮುಂಬರುವ ಜಿಬಿಎ ಎಲೆಕ್ಷನ್, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಕೂಡ ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದು ಹೇಳಿದರು.
ಮೇ ಅಥವಾ ಜೂನ್‌ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಮಾಡಬೇಕು ಅಂತ ಇದ್ದೇವೆ. ಜನವರಿ.30ಕ್ಕೆ ಕೋರ್ಟ್ ಅಲ್ಲಿ ಒಂದು ಪಿಟಿಷನ್ ಇದೆ. ಅದು ಆದ ಬಳಿಕ ಮಾಡಬೇಕು ಅಂತಾ ಇದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆ ಕೂಡ ಮಾಡಬೇಕು ಅಂತಿದ್ದು, ಅದೂ ಬ್ಯಾಲೆಟ್ ಪೇಪರ್‌ನಲ್ಲೇ ಇರುತ್ತದೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…