ರಾಜ್ಯ

ಬ್ಯಾಲೆಟ್‌ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಚುನಾವಣೆ ಆಯುಕ್ತ ಸಂಗ್ರೇಶ್‌

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್‌ ತಿಳಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಮಾತ್ರ ಇವಿಎಂ ಮಾಡಿದ್ದೇವೆ. ಬ್ಯಾಲೆಟ್‌ ಪೇಪರ್‌ನಲ್ಲಿ ಮಾಡಬಾರದು ಅಂತೇನಿಲ್ಲ. ಮುಂಬರುವ ಜಿಬಿಎ ಎಲೆಕ್ಷನ್‌, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಕೂಡ ಬ್ಯಾಲೆಟ್‌ ಪೇಪರ್‌ನಲ್ಲೇ ನಡೆಯಲಿದೆ ಎಂದು ಹೇಳಿದರು.

ಮೇ ಅಥವಾ ಜೂನ್‌ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಮಾಡಬೇಕು ಅಂತ ಇದ್ದೇವೆ. ಜನವರಿ.30ಕ್ಕೆ ಕೋರ್ಟ್‌ ಅಲ್ಲಿ ಒಂದು ಪಿಟಿಷನ್‌ ಇದೆ. ಅದು ಆದ ಬಳಿಕ ಮಾಡಬೇಕು ಅಂತಾ ಇದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆ ಕೂಡ ಮಾಡಬೇಕು ಅಂತಿದ್ದು, ಅದೂ ಬ್ಯಾಲೆಟ್‌ ಪೇಪರ್‌ನಲ್ಲೇ ಇರುತ್ತದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

6 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

12 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

12 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

14 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago