Mysore
24
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ಬಿಗ್‌ಬಾಸ್‌ ಮನೆಗೆ ಬೀಗ: ಡಿಸಿಎಂ ಡಿ.ಕೆ.ಶಿವಕುಮಾರ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಬಿಗ್‌ಬಾಸ್‌ ಮನೆಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಸಾಫ್ಟ್‌ ಕಾರ್ನರ್‌ ತೋರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿರುವುದಾಗಿ ಹೇಳಿದರು.

ಇದನ್ನು ಓದಿ : ಬಿಗ್‌ಬಾಸ್‌ ಬಂದ್‌ ಹಿಂದೆ ಡಿಕೆಶಿ ಕೈವಾಡವಿಲ್ಲ: ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ

ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ವಿಚಾರಣೆ ನಡೆಸಿದ್ದೇವೆ. ಜನರಿಗೆ ಮನರಂಜನೆ ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು.

ಇನ್ನು ಜೆಡಿಎಸ್‌ನವರ ನಟ್ಟು ಬೋಲ್ಟು ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಅಂದಾಗ ನನ್ನ ಹೆಸರನ್ನು ತೆಗೆದುಕೊಳ್ಳುತ್ತಾರೆ. ಜಾಲಿವುಡ್‌ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದರೂ ಆರೋಪ ಮಾಡಲಿ. ಮೇಳೆ ಇರುವವರನ್ನು ಕರೆದುಕೊಂಡು ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

Tags:
error: Content is protected !!