ಬೆಂಗಳೂರು: ಬಿಗ್‌ಬಾಸ್ ಮನೆಗೆ ಬೀಗ ಜಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಾಫ್ಟ್ ಕಾರ್ನರ್ ತೋರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ, ಮಾಲಿನ್ಯ ಇಲಾಖೆಯ ಜೊತೆ ಮಾತನಾಡಿದ್ದೇನೆ. ಏನಾದರೂ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸೂಚಿಸಿರುವುದಾಗಿ ಹೇಳಿದರು.
ಇದನ್ನು ಓದಿ : ಬಿಗ್‌ಬಾಸ್ ಬಂದ್ ಹಿಂದೆ ಡಿಕೆಶಿ ಕೈವಾಡವಿಲ್ಲ: ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ನಾವು ವಿಚಾರಣೆ ನಡೆಸಿದ್ದೇವೆ. ಜನರಿಗೆ ಮನರಂಜನೆ ನೀಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು.
ಇನ್ನು ಜೆಡಿಎಸ್‌ನವರ ನಟ್ಟು ಬೋಲ್ಟು ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಶಕ್ತಿ ಬೇಕು ಅಂದಾಗ ನನ್ನ ಹೆಸರನ್ನು ತೆಗೆದುಕೊಳ್ಳುತ್ತಾರೆ. ಜಾಲಿವುಡ್ ಸ್ಟುಡಿಯೋ ಉದ್ಘಾಟನೆಯನ್ನು ನಾನೇ ಮಾಡಿದ್ದೇನೆ. ಕುಮಾರಸ್ವಾಮಿಯಾದರೂ ಆರೋಪ ಮಾಡಲಿ. ಮೇಳೆ ಇರುವವರನ್ನು ಕರೆದುಕೊಂಡು ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…