ಬೆಂಗಳೂರು: ಬಿಗ್‌ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಜಾಲಿವುಡ್ ಸ್ಟುಡಿಯೋಸ್ ಹೈಕೋರ್ಟ್ ಮೊರೆ ಹೋಗಿದೆ.
ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಹಾಗೂ ಕಾರ್ಯಕ್ರಮ ನಡೆಸಲು ಪೊಲೀಸರ ಅನುಮತಿ ಪಡೆಯದೇ ಶೋ ಆರಂಭಿಸಿದ್ದಕ್ಕಾಗಿ ನೋಟಿಸ್ ನೀಡಿ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು.
ಇದನ್ನು ಓದಿ : ಬಿಗ್‌ಬಾಸ್ ಮನೆ ಸೀಜ್: ಸಚಿವ ಈಶ್ವರ್ ಖಂಡ್ರೆ ಮೊದಲ ಪ್ರತಿಕ್ರಿಯೆ
ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿದೆ. ತುರ್ತು ವಿಚಾರಣೆ ನಡೆಸುವಂತೆ ವಕೀಲರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 2.30ರ ವೇಳೆಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಇನ್ನು ಬಿಗ್‌ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಸೀಜ್ ಆಗಿದ್ದು, 17 ಮಂದಿ ಸ್ಪರ್ಧಿಗಳು ಬಿಡದಿ ಬಳಿಯ ಖಾಸಗಿ ರೆಸಾರ್ಟ್‌ಗೆ ಶಿಫ್ಟ್ ಆಗಿದ್ದಾರೆ. ಇಲ್ಲಿ ಯಾರೂ ಕೂಡ ಮೊಬೈಲ್ ಹಾಗೂ ಟಿವಿ ನೋಡುವುದಕ್ಕೂ ಕೂಡ ನಿರ್ಬಂಧ ವಿಧಿಸಲಾಗಿದೆ.





