ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡ ಮಾಡಿದ್ದು, ಈ ಬಾರಿಯೂ ಪ್ರಧಾನಿ ಮೋದಿ ವಾರಣಾಸಿಯಿಂದ ಸ್ಪರ್ಧೆ ಮಾಡಲಿದ್ದಾರೆ.
ಇಂದು ಸಂಜೆ ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಪ್ರಧಾನಿ ಮೋದಿ ಸೇರಿ 195 ಅಭ್ಯರ್ಥಿಗಳನ್ನ ಒಳಗೊಂಡಿರುವ ಅಭ್ಯರ್ಥಿಗಳ ಪಟ್ಟಿಯನ್ನ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಬಿಜೆಪಿ ನಾಯಕ ವಿನೋದ್ ತಾವ್ಡೆ, “ಕಳೆದ ಒಂದು ದಶಕದಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನಡೆಸುತ್ತಿದ್ದೇವೆ. ಈ ಬಾರಿ ಬಿಜೆಪಿ 400 ಕ್ಷೇತ್ರಗಳನ್ನ ಗುರಿ ಹೊಂದಿದೆ. ಕೇಂದ್ರದಲ್ಲಿ ಮತ್ತೆ ಮೋದಿಯವ್ರ ಸರ್ಕಾರ ರಚನೆಯಾಗಲಿದೆ” ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮುಖ್ಯಮಂತ್ರಿಗಳು, ರಾಜ್ಯ ಅಧ್ಯಕ್ಷರು, ಉಸ್ತುವಾರಿಗಳು, ಸಹ ಉಸ್ತುವಾರಿಗಳು ಮತ್ತು ವಿವಿಧ ರಾಜ್ಯಗಳ ಚುನಾವಣಾ ಉಸ್ತುವಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…