ರಾಜ್ಯ

ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ; ನಿಖಿಲ್‌!

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್‌, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಇದು ನನ್ನ ವಯಕ್ತಿಕ ನಿಲುವಾಗಿದೆ. ಈ ಬಗ್ಗೆ ಈಗಾಗಲೇ ಹಲವಾರು ಬಾರಿ ಮಾತನಾಡಿದ್ದೇನೆ. ಇಂದು ಒಂದು ಮಾತನಾಡಿ, ನಾಳೆ ಬೇರೆ ಮಾತನಾಡುವ ವ್ಯಕ್ತಿತ್ವ ನನ್ನದಲ್ಲ. ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಯಾರು ಸ್ಪರ್ಧಿಸಬೇಕೆಂದು ಚರ್ಚಿಸಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲು ಕಂಡ ನಂತರ ರಾಜಕೀಯದಿಂದ ದೂರ ಸರಿದಿದ್ದ ನಿಖಿಲ್‌, ಸದ್ಯ ಲೋಕಸಭಾ ಚುನಾವಣಾ ಹಿನ್ನಲೆ ಕೋಲಾರ ಮತ್ತು ಮಂಡ್ಯ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ನೆನ್ನೆ ಮತ್ತು ಇಂದು ಸರಣಿ ಸಭೆಗಳನ್ನು ಆಯೋಜಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು, ಪಕ್ಷದ ಮುಖಂಡರು, ಚುನಾವಣಾ ಆಕಾಂಕ್ಷಿಗಳೊಂದಿಗೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿ ಯಾವ ಕ್ಷೇತ್ರದಲ್ಲಿ ಯಾರ್ಯಾರು ಸ್ಪರ್ಧಿಸಬೇಕು ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಎನ್‌ಡಿಎ ಜೊತೆಗೆ ಜೆಡಿಎಸ್‌ ಉತ್ತಮ ಸಂಬಂಧ ಹೊಂದಿದೆ. ದೇವೇಗೌಡರನ್ನು ಅತ್ಯಂತ ಗೌರವದಿಂದ ಪ್ರಧಾನಿ ಮೋದಿ ಅವರು ನಡೆಸಿಕೊಂಡಿದ್ದಾರೆ. ಹೀಗಾಗಿ ೨೮ ಕ್ಷೇತ್ರಗಳಲ್ಲಿಯೂ ಜೆಡಿಎಸ್‌, ಬಿಜೆಪಿ ಅಣ್ಣತಮ್ಮಂದಿರಂತೆ ದುಡಿದು ಗೆಲ್ಲಬೇಕು ಎಂದು ವಿವರಿಸಿದರು.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಿದ್ದಾರೆ. ಜನವರಿ 22ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಎಚ್‌.ಡಿ ದೇವೇಗೌಡರ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

andolanait

Recent Posts

ಅಂಗಡಿಗಳಲ್ಲಿ ಬಿತ್ತನೆ ಮುಸಕಿನ ಜೋಳ ಸಿಗದೆ ರೈತರ ಪರದಾಟ

ಎಚ್. ಡಿ. ಕೋಟೆ : ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲು ಮಾರಾಟದ ಅಂಗಡಿಗಳಲ್ಲಿ ಬಿತ್ತನೆ ಬೀಜ…

5 mins ago

ಮೇಟಗಳ್ಳಿ : ಹಾವು-ಚೇಳುಗಳದ್ದೇ ದರ್ಬಾರು

ಮೈಸೂರು : ನಗರದ ಜನ ವಸತಿ ಹಾಗೂ ಕೈಗಾರಿಕಾ ಪ್ರದೇಶವಾಗಿರುವ ಮೇಟಗಳ್ಳಿ ಬಡಾವಣೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾವು-ಚೇಳುಗಳ ಆವಾಸ ಸ್ಥಾನವಾಗಿ…

12 mins ago

ʼದಟ್ಟಾರಣ್ಯದಲ್ಲಿ ಅಲೆದು ಅಲೆದು ದೇಹ ದಣಿದಿತ್ತುʼ

ಕೊಡಗಿನ ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಜೆ.ಎಸ್.ಶರಣ್ಯ ಅವರ ಮನದಾಳದ ಮಾತು ಪ್ರಶ್ನೆ : ನೀವು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾಡಿಗೆ ಹೋಗಿದ್ದು,…

22 mins ago

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…

2 hours ago

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

18 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

18 hours ago