ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಇದು ನನ್ನ ವಯಕ್ತಿಕ ನಿಲುವಾಗಿದೆ. ಈ ಬಗ್ಗೆ ಈಗಾಗಲೇ ಹಲವಾರು ಬಾರಿ ಮಾತನಾಡಿದ್ದೇನೆ. ಇಂದು ಒಂದು ಮಾತನಾಡಿ, ನಾಳೆ ಬೇರೆ ಮಾತನಾಡುವ ವ್ಯಕ್ತಿತ್ವ ನನ್ನದಲ್ಲ. ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಯಾರು ಸ್ಪರ್ಧಿಸಬೇಕೆಂದು ಚರ್ಚಿಸಲಾಗುವುದು ಎಂದು ತಿಳಿಸಿದರು.
ಕಳೆದ ವರ್ಷ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲು ಕಂಡ ನಂತರ ರಾಜಕೀಯದಿಂದ ದೂರ ಸರಿದಿದ್ದ ನಿಖಿಲ್, ಸದ್ಯ ಲೋಕಸಭಾ ಚುನಾವಣಾ ಹಿನ್ನಲೆ ಕೋಲಾರ ಮತ್ತು ಮಂಡ್ಯ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ನೆನ್ನೆ ಮತ್ತು ಇಂದು ಸರಣಿ ಸಭೆಗಳನ್ನು ಆಯೋಜಿಸಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು, ಪಕ್ಷದ ಮುಖಂಡರು, ಚುನಾವಣಾ ಆಕಾಂಕ್ಷಿಗಳೊಂದಿಗೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿ ಯಾವ ಕ್ಷೇತ್ರದಲ್ಲಿ ಯಾರ್ಯಾರು ಸ್ಪರ್ಧಿಸಬೇಕು ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಎನ್‌ಡಿಎ ಜೊತೆಗೆ ಜೆಡಿಎಸ್ ಉತ್ತಮ ಸಂಬಂಧ ಹೊಂದಿದೆ. ದೇವೇಗೌಡರನ್ನು ಅತ್ಯಂತ ಗೌರವದಿಂದ ಪ್ರಧಾನಿ ಮೋದಿ ಅವರು ನಡೆಸಿಕೊಂಡಿದ್ದಾರೆ. ಹೀಗಾಗಿ ೨೮ ಕ್ಷೇತ್ರಗಳಲ್ಲಿಯೂ ಜೆಡಿಎಸ್, ಬಿಜೆಪಿ ಅಣ್ಣತಮ್ಮಂದಿರಂತೆ ದುಡಿದು ಗೆಲ್ಲಬೇಕು ಎಂದು ವಿವರಿಸಿದರು.
ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಿದ್ದಾರೆ. ಜನವರಿ 22ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಎಚ್.ಡಿ ದೇವೇಗೌಡರ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…