ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಲೋಕಸಭಾ ಚುನಾವಣೆಯ ಸೋಲಿನ ಬಗ್ಗೆ ಆತ್ಮವಲೋಕನ ಮಾಡಲು ಸಿಎಂ ಸಿದ್ದರಾಮಯ್ಯು ಸಭೆ ಕರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಶನಿವಾರ (ಜೂನ್ ೮) ಮೈಸೂರಿಗೆ ಆಗಮಿಸಿ ರಾತ್ರಿ ವಾಸ್ತವ್ಯ ಹೂಡಿ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಮುನ್ನಡೆ ಮತ್ತು ಕಾರ್ಯಕ್ಷಮತೆಯನ್ನು ಗಮನಿಸಿ, ಪಕ್ಷದ ಕಳಪೆ ಪ್ರದರ್ಶನಕ್ಕೆ ಕಾರಣವನ್ನು ವಿಶ್ಲೇಷಿಸಲಿದ್ದಾರೆ.
ಹಾಸನ ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ, ಹಳೇ ಮೈಸೂರು ಭಾಗದ ಎಲ್ಲಾ ಸಚಿವರು, ಶಾಸಕರು ಮತ್ತು ಇತರ ಹಿರಿಯ ಮುಖಂಡರನ್ನು ಭೇಟಿ ಮಾಡೊ ಎಲ್ಲಿ ತಪ್ಪಾಗಿದೆ ಎಂದು ಅರಿಯಲು ಸಿಎಂ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರ ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. ಈ ಬಗ್ಗೆಯೂ ಎಡವಿದೆಲ್ಲಿ ಎಂದು ಆತ್ಮವಲೋಕನದ ಬಗ್ಗೆ ಚರ್ಚಿಸಲಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾಂಗ್ರೆಸ್‍ನ ಎಂ.ಲಕ್ಷ್ಮಣ ವಿರುದ್ಧ 1,39,262 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಎನ್‍ಡಿಎ ಅಭ್ಯರ್ಥಿಯಾಗಿದ್ದ ರಾಜ್ಯ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‍ನ ವೆಂಕಟ್ರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಸೋಲಿಸಿದರು. ಮಂಡ್ಯದಲ್ಲಿ ಕುಮಾರಸ್ವಾಮಿ 2,84,620 ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದಾರೆ.
ರಾಜ್ಯಸಭೆ, ಪರಿಷತ್ತಿನಲ್ಲಿ ಪಕ್ಷವು ಸಮುದಾಯಕ್ಕೆ ಅವಕಾಶ ನೀಡಲಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರನ್ನು ಕಣಕ್ಕಿಳಿಸಲಾಗಿದ್ದರೂ ಎಲ್ಲಿ ಹಿನ್ನಡೆಯಾಯಿತು ಎಂಬ ಬಗ್ಗೆ ಸಿದ್ದರಾಮಯ್ಯ ತಮ್ಮ ನಿಷ್ಠಾವಂತ ಬೆಂಬಲಿಗರೊಂದಿಗೆ ಈಗಾಗಲೇ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,…
ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್ ಸಿಂಗ್ ಅಭಿನಯದ ಧುರಂಧರ್-2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ…
ವಾಷಿಂಗ್ಟನ್: ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…