ಹಾಸನ : ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ ೨೮ ಸ್ಥಾನಗಳನ್ನು ಗೆದ್ದರೇ ಅದರ ಕ್ರೆಡಿಟ್ ನೇರವಾಗಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ವಿನಃ ಬೇರಾವ ನಾಯಕರಿಗೆ ಅಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.
ಹಿಂದೂ ಧರ್ಮದ ಮತ್ತು ದೇಶದ ಉದ್ದಾರದ ದೃಷ್ಠಯಿಂದ ನರೇಂದ್ರ ಮೋದಿ ಅವರು ೩ನೇ ಬಾರಿಗೆ ಪ್ರಧಾನಿಯಾಗಬೇಕು ಎಂಬ ಕಾರಣದಿಂದಾಗಿ ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದರು.
ಬಿಜೆಪಿ ಗೆಲುವಿಗೆ ಜೋಡೆತ್ತು ಕೆಲಸ ಮಾಡುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಯನ್ನು ಲೇವಡಿ ಮಾಡಿದ ಯೆತ್ನಾಳ್, ಜೋಡೆತ್ತುಗಳಲ್ಲಿ ಒಬ್ಬರು ದೆಹಲಿಯಲ್ಲಿ ಮತ್ತು ಇನ್ನೊಬ್ಬರು ಬೆಂಗಳೂರಿನಲ್ಲಿದ್ದಾರೆ ಎಂದರು.
ಇದೇ ವೇಳೆ ಮಾಜಿ ಸಚಿವ ವಿ.ಸೋಮಣ್ಣ ರಾಜೀನಾಮೆ ನೀಡುವುದಿಲ್ಲ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣ ಎಲ್ಲರಿಗೂ ತಿಳಿದಿದೆ. ದುರದೃಷ್ಟವಶಾತ್ ಬಿಜೆಪಿಯಲ್ಲಿರುವ ಕೆಲವು ನಾಯಕರು ಅವರನ್ನು ರಾಜ್ಯದಲ್ಲಿ ಮಹಾನ್ ನಾಯಕರೆಂದು ಬಿಂಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…