Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ : ರಾಜಕೀಯ ನಾಯಕರಿಂದ ಮತದಾನ

ಬೆಂಗಳೂರು : ಲೋಕಸಭಾ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾವಣೆ ಮಾಡುತ್ತಿದ್ದಾರೆ.

ಮುಂಜಾನೆಗೆ ಹೋಲಿಸಿದರೆ ಮಧ್ಯಾಹ್ನ ೧ಗಂಟೆಯ ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾವಣೆ ಮಾಡುತ್ತಿರುವುದು ಕಂಡು ಬಂದಿದೆ.

ಈ ವೇಳೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಸೇರಿದಂತೆ ಅನೇಕ ಗಣ್ಯರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾವಣೆ ಮಾಡಿದರು. ಎಐಸಿಸಿ ಅಧ್ಯಕ್ಷರಾದ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ  ಮಲ್ಲಿಕಾರ್ಜುನ ಖರ್ಗೆ  ಹಾಗೂ ಅವರ ಶ್ರೀಮತಿಯವರಾದ ರಾಧಾಬಾಯಿ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಬಸವನಗರದ ಕನ್ನಡ ಹಿರಿಯ ಪ್ರಾಥಮಿಕ‌ ಶಾಲೆಯ ಬೂತ್ ನಂಬರ್ 120 ರಲ್ಲಿ ಮತದಾನ ಮಾಡಿದರು.

ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಇಂದು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಉಡುಗಿಯ ಸ್ವಗ್ರಾಮದಲ್ಲಿ ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದರು.

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ತಾತ (ಶತಾಯುಷಿ ಡಾ. ಭೀಮಣ್ಣ ಖಂಡ್ರೆ), ತಂದೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಮೊಮ್ಮಗ (ಬೀದರ್ ಕಾಂಗ್ರೆಸ್ ಅಭ್ಯರ್ಥಿ) ಸಾಗರ್ ಖಂಡ್ರೆ ಮತ ಚಲಾಯಿಸಿದರು.

ಇನ್ನು, ಶಿವಮೊಗ್ಗ ನಗರದ ಬಸವನಗುಡಿಯ ಸತ್ಯ ಸಾಯಿ ಶಾಲೆಯ ಮತಗಟ್ಟೆಯಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಡಿ ಹೆಚ್ ಶಂಕರಮೂರ್ತಿ ಅವರು, ಪತ್ನಿ ಶ್ರೀಮತಿ ಸತ್ಯವತಿ ಅವರು ಮತ್ತು ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು, ಪತ್ನಿ ಶ್ರೀಮತಿ ಪ್ರತಿಭಾ ಅರುಣ್ ಅವರು, ಪುತ್ರಿ ಡಿ.ಎ. ಸುಪ್ರಿಯಾ ಮತದಾನ ಮಾಡಿದರು.

Tags: