ರಾಜ್ಯ

ಲೋಕಸಭೆ ಚುನಾವಣೆ: ಯುವ, ಪರಿಚಿತ ಹೊಸ ಮುಖಗಳಿಗೆ ಟಿಕೆಟ್: ಡಿಕೆ ಶಿವಕುಮಾರ್

ಹುಬ್ಬಳ್ಳಿ : ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಯುವ, ಹೊಸ ಮುಖಗಳು, ಜನರಿಗೆ ಪರಿಚಿತರು ಹಾಗೂ ಉತ್ತಮ ವಾಕ್ಚಾತುರ್ಯ ಹೊಂದಿರುವವರು ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾಗುವ ಉಜ್ವಲ  ಅವಕಾಶವಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಮೀಕ್ಷೆ ನಡೆಸಲಾಗುತ್ತಿದೆ. ನಮ್ಮ ಎಲ್ಲ ಸಚಿವರನ್ನು ಜಿಲ್ಲೆಗಳಿಗೆ ಕಳುಹಿಸಿದ್ದೇವೆ ಎಂದರು.

ಈಗಿನಿಂದಲೇ ಅವರು ವರದಿಯನ್ನು (ಸಂಭಾವ್ಯ ಅಭ್ಯರ್ಥಿಗಳ ಮೇಲೆ) ಒದಗಿಸಬೇಕು. 75ರಷ್ಟು ಮಂದಿ ತಮಗೆ ಗೊತ್ತುಪಡಿಸಿದ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ ಎಂದು ತಿಳಿಸಿದರು.

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ದೆಹಲಿಯ ಹಿರಿಯರು ಕೆಲವು ಮಾರ್ಗದರ್ಶನ ನೀಡಿದ್ದಾರೆ. ಹೊಸ ಮುಖ, ಯುವಕರು, ಜನರಿಗೆ ಪರಿಚಿತರು, ಉತ್ತಮ ವಾಕ್ಚಾತುರ್ಯ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ  ಕೆಲವು ಅರ್ಹತೆಗಳಾಗಿವೆ ಎಂದು ಅವರು ಮಾಹಿತಿ ನೀಡಿದರು.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago