ಮೈಸೂರು: ಲೋಕಸಭಾ ಚುನಾವಣಾ 2024 ರ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಹಾಗೂ ಉತ್ತರಪ್ರದೇಶದ ರಾಯಬರೇಲಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ.
ವಯನಾಡಿನಲ್ಲಿ ಹಾಲಿ ಸಂಸದರೂ ಆಗಿರುವ ರಾಹುಲ್ ಗಾಂಧಿ ಅವರು ಬೆಳಿಗ್ಗೆ 10ರ ಸಮಯಕ್ಕೆ 65908 ಮತಗಳ ಅಂತರದಿಂದ ಮುಂದಿದ್ದಾರೆ. ಪಕ್ಷದ ಭದ್ರಕೋಟೆ ರಾಯಬರೇಲಿಯಲ್ಲಿ 17480 ಮತಗಳ ಮುನ್ನಡೆ ಸಾಧಿಸಿದ್ದಾರೆ.
ರಾಹುಲ್ ಗಾಂಧಿ ಅವರು ರಾಯಬರೇಲಿಯಲ್ಲಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಎದುರಿಸುತ್ತಿದ್ದಾರೆ. ವಯನಾಡಿನಲ್ಲಿ ಅವರ ಎದುರಾಳಿ ಸಿಪಿಐ ನಾಯಕಿ ಅನ್ನಿ ರಾಜಾ ಹಾಗೂ ಬಿಜೆಪಿಯ ಕೆ.ಸುರೇಂದ್ರನ್ ಅವರಿಗೆ ಪೈಪೋಟಿ ನೀಡುತ್ತಿದ್ದಾರೆ.





