ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ.
ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್ ನೀಡಿರುವುದರಿಂದ ತಪ್ಪಾಗಿದೆ ಎಂಬುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆದಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಲಾಗಿದೆ. ಇದರಲ್ಲಿ ಅಧಿಕಾರಿಗಳ ತಪ್ಪು ಎನ್ನಲಾಗುತ್ತಿದೆ. ಆದರೆ ಇದರ ಹಿಂದೆ ಸಿಎಂ ಸಿದ್ದರಾಮಯ್ಯ ಇರುವುದನ್ನು ಮುಚ್ಚಿಹಾಕಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.
ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಪೊಲೀಸರಿಗೂ ವರ್ಗಾವಣೆ, ಬಡ್ತಿ ಬೇಕಿರುತ್ತದೆ. ಆದ್ದರಿಂದ ಈ ರೀತಿ ತನಿಖೆ ನಡೆಯುತ್ತಿದೆ. ಪೊಲೀಸರು ವರದಿ ನೀಡಿದರೂ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡುವುದು ಖಚಿತ ಎಂದರು.
ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ. ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿರುವಾಗ ಮುಖ್ಯಮಂತ್ರಿಗೆ ಕ್ಲೀನ್ ಚಿಟ್ ನೀಡುವುದು ಖಚಿತ. ಆದ್ದರಿಂದ ಹೋರಾಟವನ್ನು ಮತ್ತೆ ಆರಂಭಿಸುತ್ತೇವೆ. ತನಿಖೆಯನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…