Mysore
28
broken clouds

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್‌ ಸಿಂಧ್ಯಾ ಅವರೊಂದಿಗೆ ಮಾತನಾಡುತ್ತಿದ್ದಾಗ ತಲೆ ಸುತ್ತು ಬಂದು ಕುಳಿತಲ್ಲಿಯೇ ಹೆಗ್ಡೆ ಅವರು ಕುಸಿದು ಬಿದ್ದರು. ಅಲ್ಲಿದ್ದವರು ನೀರು ಕುಡಿಸಿದರೂ ಚೇತರಿಕೆ ಕಾಣಲಿಲ್ಲ. ಬಳಿಕ ಸರ್ಕಾರಿ ವಾಹನದಲ್ಲೇ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮಧುಮೇಹದಿಂದ ಇದ್ದದ್ದರಿಂದ ಅವರಿಗೆ ಈ ರೀತಿ ಆಗಿರಬಹುದು. ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Tags:
error: Content is protected !!