ರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

ಬೆಂಗಳೂರು: ಆದಾಯಕ್ಕೀಂತ ಹೆಚ್ಚಿನ ಆಸ್ತೀ ಸಂಪಾದನೆ ಮಾಡಿದ ಆರೋಪದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದ್ದಾರೆ.

ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಹಾವೇರಿ, ಉಡುಪಿ, ಕಲಬುರ್ಗಿ, ಬೆಂಗಳೂರು ಸೇರಿ 40ಕ್ಕೂ ಹೆಚ್ಚು ಕಡೆ ಮಿಂಚಿನ ದಾಳಿ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆಪಾರ ಪ್ರಮಾಣದ ನಗದು, ಆಸ್ತೀ, ಒಡವೆ, ಚರ- ಸ್ಥಿರ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.

ಇದನ್ನು ಓದಿ: ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ರಾಜಧಾನಿ ಬೆಂಗಳೂರಿನಲ್ಲೂ ಸಹ ಇಬ್ಬರು ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಜಿ. ಮಂಜುನಾಥ್ ಹಾಗೂ ಬಿಎಂಆರ್‍ಸಿಎಲ್‍ನ ಭೂಸ್ವಾಧೀನ ಅಧಿಕಾರಿ ಎನ್.ಕೆ.ಗಂಗಾಮಾರೀಗೌಡ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಬಿಗ್‌ ಶಾಕ್‌ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

1 hour ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

2 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

2 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

2 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

3 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

3 hours ago