ಬೆಂಗಳೂರು: ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ, ಅಧಿಕಾರ ದುರುಪಯೋಗ, ರಾಜ್ಯ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆಗೆ ವಂಚನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು, ಶೃಂಗೇರಿ ಹಾಗೂ ತಾಲ್ಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದಲ್ಲಿ ರಾಜೇಗೌಡರ ಮನೆ ಮತ್ತು ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಶಾಸಕರು, ಹಾಗೂ ಅವರ ಪತ್ನಿ ಪುಷ್ಬ ಸೇರಿದಂತೆ ಕೆಲವು ಕುಟುಂಬದ ಸದಸ್ಯರು ಮನೆಯಲ್ಲೇ ಇದ್ದರು ಎನ್ನಲಾಗಿದೆ.
ಇದನ್ನು ಓದಿ : ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ
ನ್ಯಾಯಾಲಯದ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿತ್ತು. ಎಫ್‍ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದಾರೆ. ಶಾಸಕ ರಾಜೇಗೌಡ, ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.
2 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಟಿ.ಡಿ.ರಾಜೇಗೌಡ ಅವರು, ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್‍ನಲ್ಲಿ ಸರಿಯಾದ ಆಸ್ತಿ ಘೋಷಣೆ ಮಾಡಿಲ್ಲ ಎನ್ನುವ ಬಗ್ಗೆ ದೂರು ದಾಖಲಿಸಿತ್ತು. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್ ದೂರು ನೀಡಿದ್ದರು.
ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಸೂಚನೆಯಂತೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…