ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು, ಮೈಸೂರು, ಬಳ್ಳಾರಿ, ಕೊಪ್ಪಳದ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮೈಸೂರಿನಲ್ಲೂ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪವಿಭಾಗಾಧಿಕಾರಿ ವೆಂಕಟರಾಮ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಇನ್ನು ಮೈಸೂರಿನ ಸಾತಗಳ್ಳಿಯ ಜೆಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ನಡೆಸಿದ್ದಾರೆ.
ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್ ನೀಡಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





