ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಟಿ ದಾಳಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಕೂಡ ದಾಳಿ ನಡೆಸಿ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬಿಬಿಎಂಪಿಯ ಹಲವು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲೋಕಾಯುಕ್ತ ಡಿವೈಎಸ್‌ಪಿ ಸುನೀಲ್ ನಾಯಕತ್ವದಲ್ಲಿ 8 ಅಧಿಕಾರಿಗಳನ್ನೊಳಗೊಂಡ ತಂಡ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಲಾಗಿದ್ದು, ಮನೆಯಲ್ಲಿ ಮೂಲೆ ಮೂಲೆಯನ್ನು ಬಿಡದೇ ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





