ಬೆಂಗಳೂರು : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ರಾಜ್ಯದ ಒಟ್ಟು ೧೨ ಕೇಸ್ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ.
ರಾಜ್ಯದ ೩೦ ಕಡೆ ಒಟ್ಟು ನೂರಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ತುಮಕೂರಿನ ವಾಣಿಜ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಮುದ್ದುಕುಮಾರ್, ಯಾದಗಿರಿ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕರು ಬಲವಂತ್ ರಾಥೋಡ್, ಹೆಬ್ಬಗೋಡಿ ನಗರಸಭೆ ಆಯುಕ್ತ ಕೆ.ನರಸಿಂಹ ಮೂರ್ತಿ, ಬೆಂಗಳೂರಿನ ಕೆಐಡಿಬಿ ಅಧಿಕಾರಿ ಬಿ.ವಿ ರಾಜಾ. ಕಮರ್ಷಿಯಲ್ ಟ್ಯಾಕ್ಸ್ ಜಂಟಿ ಆಯುಕ್ತ ರಮೇಶ್ ಕುಮಾರ್, ಹಾಗೂ ದೊಡ್ಡಬಳ್ಳಾಪುರದ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಆರ್.ಸಿದ್ದಪ್ಪ, ಶಿವಮೊಗ್ಗದ ತೋಟಗಾರಿಕೆ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರಕಾಶ್, ಮಂಡ್ಯ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಮಂಗಳೂರಿನ ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿಎಲ್, ಬೆಂಗಳೂರು ಉತ್ತರಉಪವಿಭಾಗದ ಎಫ್ ಡಿಎಟಿಆರ್ ಮಂಜುನಾಥ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…
ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್ ಝಡ್ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…
ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…
ಎಚ್.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…
ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…