ರಾಜ್ಯ

ಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ಲೋಕಾಯುಕ್ತಕ್ಕೆ ವಾಪಸ್‌ ಕಳುಹಿಸಲಿದ್ದು, ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಿಂದ ದೂರುಗಳ ಕಡತ ಹೋಗಿದೆ. ಇದಾದ ನಂತರ ಕ್ಲಾರಿಫಿಕೇಶನ್‌ ಕೇಳಿ ವಾಪಸ್‌ ಕಳುಹಿಸಿದ್ದೇವೆ ಎಂದು ರಾಜ್ಯಪಾಲರು ಹೇಳುತ್ತಿದ್ದಾರೆ. ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರೆಜೆಕ್ಟ್‌ ಆಗುವುದಿಲ್ಲ ಎಂದರು.

ಇನ್ನು ರಾಜ್ಯಪಾಲರ ಕಚೇರಿಯಿಂದ ಮೂರು ದೂರುಗಳ ಕುರಿತು ಕ್ಲಾರಿಫಿಕೇಶನ್‌ ಕೇಳಿದ್ದಾರೆ ಎಂದಾದರೆ ಲೋಕಾಯುಕ್ತದವರು ಸುಮ್ಮನೆ ಇರಲು ಬಯಸುವುದಿಲ್ಲ. ಸ್ಪಷ್ಟೀಕರಣ ನೀಡಬೇಕಾಗುತ್ತದೆ. ತದನಂತರದ ವಿಚಾರ ರಾಜ್ಯಪಾಲರಿಗೆ ಬಿಟ್ಟದ್ದು ಎಂದು ಹೇಳಿದರು.

ಇನ್ನು ಮುಡಾ ವಿಚಾರದಿಂದ ಸಿಎಂ ಸಿದ್ದರಾಮಯ್ಯ ಆತಂಕಗೊಂಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಯಾವುದೇ ಆತಂಕದಲ್ಲಿಲ್ಲ. ಎಲ್ಲಾ ವಿಚಾರದಲ್ಲೂ ಸ್ಪಷ್ಟವಾಗಿದ್ದಾರೆ. ಸಿಎಂ ಆಗಿ ಅವರು ಅಧಿಕಾರ ದುರುಪಯೋಗಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

31 mins ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

33 mins ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

39 mins ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

47 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

52 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

15 hours ago