ರಾಜ್ಯ

Loksabha Election Results 2024: ಕರ್ನಾಟಕದ ಮತ ಎಣಿಕೆ ಕೇಂದ್ರದಲ್ಲಿ ಹಲವು ಎಡವಟ್ಟು, ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ ಮತ ಎಣಿಕೆ ಆರಂಭದ ವೇಳೆ ರಾಜ್ಯದ ಕೆಲವೆಡೆ ಎಡವಟ್ಟುಗಳು ಆದವು. ಅದರ ಮಾಹಿತಿ ಇಲ್ಲಿದೆ.

ಸ್ಟ್ರಾಂಗ್‌ ರೊಂ ಕೀ ಮರೆತು ಬಂದ ಅಧಿಕಾರಿ
ವಿಜಯಪುರಲ್ಲಿ ಸ್ಟ್ರಾಂಗ್‌ ರೊಂ ಓಪನ್‌ ವೇಳೆ ಅಧಿಕಾರಿ ಪೇಚಿಗೆ ಸಿಲುಕಿದ್ದಾರೆ. ವಿಜಯಪುರ ಲೋಕಸಭಾ ಚುನಾವಣೆ ಮತ ಎಣಿಕೆಯ ಅಧಿಕಾರಿ ಸ್ಟ್ರಾಂಗ್‌ ರೊಂ ಕೀಯನ್ನು ಮನೆಯಲ್ಲೇ ಬಿಟ್ಟು ಬಂದಿದ್ದಾರೆ. ಬಳಿಕ ಕೀ ತರಲು ಮನೆಗೆ ಹೋಗಿ ತಡವಾಗಿ ಕೀ ತಂದಿದ್ದಾರೆ

ಮೊಬೈಲ್‌ಗಾಗಿ ಏಜೆಂಟ್‌ ಹಾಗೂ ಪೊಲೀಸರ ಮಧ್ಯೆ ವಾಗ್ವಾದ
ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್‌ ತೆಗೆದುಕೊಂಡು ಹೋಗಲು ಚುನಾವಣಾ ಏಜೆಂಟ್‌ಗಳಿಗೆ ಅವಕಾಶವಿದ್ದರೂ ಪೊಲೀಸರು ತಡೆದರು. ಈ ವೇಳೆ ಪೋಲಿಸ್‌ ಹಾಗೂ ಏಜೆಂಟರ ನಡುವೆ ವಾಗ್ವಾದ ನಡೆಯಿತು. ಬಳಿಕ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌, ಪೊಲೀಸ್‌ ಆಯುಕ್ತು ಸ್ಥಳಕ್ಕೆ ಬಂದು ಮನವೊಲಿಕೆ ಮಾಡಿದರು.

ಎಣಿಕೆ ಕೇಂದ್ರದಲ್ಲಿಯೂ ಕೇಸರಿ ಶಾಲು ಪ್ರದರ್ಶನ
ಬೀದರ್‌ನಲ್ಲಿ ಬಿಜೆಪಿ ಏಜೆಂಟ್‌ಗಳು ಮತ ಎಣಿಕೆ ಕೇಂದ್ರಕ್ಕೆ ಕೇಸರು ಸಾಲು ಧರಿಸಿಕೊಂಡು ಬಂದರು. ಈ ವೇಳೆ ಬಿಜೆಪಿ ಏಟೆಂಜರು ಶಕ್ತಿ ಪ್ರದರ್ಶಿಸಿದರು. ಇದರಿಂದ ಕೆಲಕಾಲ ಗೊಂದಲವು ಉಂಟಾಗಿತ್ತು.

ವರುಣಾದಲ್ಲಿ ಕೈಕೊಟ್ಟ ಮತ ಯೂನಿಟ್‌
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವರುಣಾದಲ್ಲಿ 1 ನೇ ಯೂನಿಟ್‌ ತಾಂತ್ರಿಕ ಕಾರಣದಿಂದ ಕೈಕೊಟ್ಟಿದ್ದು, ಇದರಿಂದ ಮತ ಎಣಿಕೆ ಕಾರ್ಯ ವಿಳಂಬವಾಯಿತು.

ಮತ ಎಣಿಕೆ ಅಧಿಕಾರಿ ಅಸ್ವಸ್ಥ
ವಿಜಯಪುರದಲ್ಲಿ ಮತ ಎಣಿಕೆ ವೇಳೆ ಅಧಿಕಾರಿ ಅಸ್ವಸ್ಥಗೊಂಡರು. ಮತ ಎಣಿಕೆ ಸೂಪರ್‌ವೈಸರ್‌ ಸಿದ್ದರಾಜು ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಇವರನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು.

ಮತ ಎಣಿಕೆ ಕೇಂದ್ರದಲ್ಲಿ ಏಜೆಂಟ್‌ಗಳಿಗೆ ಕುರ್ಚಿ ಕೊರತೆ
ರಾಯಚೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ ಏಜೆಂಟರುಗಳಿಗೆ ಕುರ್ಚಿ ಕೊರತೆ ಉಂಟಾಗಿದ್ದು, ಏಜೆಂಟರು ಕುಳಿತುಕೊಳ್ಳಲು ಚೇರ್‌ ಇಲ್ಲದೇ, ಅಂಚೆ ಮತದಾನ ಎಣಿಕೆ ವಿಳಂಬವಾಗಿತ್ತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

8 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

9 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

10 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

13 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

13 hours ago