ರಾಜ್ಯ

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ದಾಖಲೆ ಪ್ರಮಾಣದ ಮದ್ಯ, ನಗದು ವಶ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕರ್ನಾಟಕದಾದ್ಯಂತ ದಾಖಲೆಯ ಪ್ರಮಾಣದಲ್ಲಿ ನಗದು, ಮದ್ಯ ಜಪ್ತಿ ಮಾಡಿದೆ.

ಮಾರ್ಚ್‌ 14ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿತ್ತು. ಅಂದರೆ ಕೇವಲ 34 ದಿನಗಳಷ್ಟೆ. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 406.73 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜೊತೆಗೆ ರಾಜ್ಯದಲ್ಲಿ ಈವರೆಗೆ ಯಾವುದೇ ಲೋಕಸಭಾ ಚುನಾವಣೆಯಲ್ಲಿ ಜಪ್ತಿ ಮಾಡದಷ್ಟು ಹಣ, ಹೆಂಡ, ಉಡುಗೊರೆ ಹಾಗೂ ಚಿನ್ನವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ.

ಜಪ್ತಿಯಾಗಿರುವ ನಗದು, ಮದ್ಯದ ಪೈಕಿ, 78 ಕೋಟಿ ರೂ ನಗದು, 177 ಕೋಟಿ ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಮದ್ಯ ಜಪ್ತಿ ಇದಾಗಿದೆ. ಈ ಮೂಲಕ ದೇಶದಲ್ಲಿಯೇ ಮದ್ಯ ಜಪ್ತಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಉಳಿದಂತೆ 11.21 ಕೋಟಿ ರೂ. ಮೌಲ್ಯದ ಮಾದಕ ವಸ್ತು, 8.14 ಕೋಟಿ ರೂ. ಮೌಲ್ಯದ ಉಡುಗೊರೆ, 59 ಕೋಟಿ ರೂ. ಮೌಲ್ಯದ ಬೆಳ್ಳಿ ಬಂಗಾರ ಹಾಗೂ ಡೈಮೆಂಡ್‌, 72 ಕೋಟಿ ರೂ.ಮೌಲ್ಯದ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ನೀತಿ ಸಂಹಿತೆ ಜಾರಿಯಾದಾಗಿನಿಂದ ಕೋಟ್ಯಂತರ ರೂಪಾಯಿ ಹಣ ಜೊತೆ ದೇಶದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮದ್ಯ ವಶಪಡಿಸಿಕೊಂಡಿರುವುದು ದಾಖಲೆ ಸೃಷ್ಠಿಯಾಗಿದೆ. ಇದು ಚುನಾವಣಾ ಅಧಿಕಾರಿಗಳಿಗೂ ಅಚ್ಚರಿಯ ಸಂಗತಿಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

3 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

3 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

3 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

3 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

3 hours ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

3 hours ago