ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕರ್ನಾಟಕದಾದ್ಯಂತ ದಾಖಲೆಯ ಪ್ರಮಾಣದಲ್ಲಿ ನಗದು, ಮದ್ಯ ಜಪ್ತಿ ಮಾಡಿದೆ.
ಮಾರ್ಚ್ 14ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿತ್ತು. ಅಂದರೆ ಕೇವಲ 34 ದಿನಗಳಷ್ಟೆ. ಅಂದಿನಿಂದ ಇಂದಿನವರೆಗೆ ಬರೋಬ್ಬರಿ 406.73 ಕೋಟಿ ರೂ. ಮೌಲ್ಯದ ನಗದು, ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜೊತೆಗೆ ರಾಜ್ಯದಲ್ಲಿ ಈವರೆಗೆ ಯಾವುದೇ ಲೋಕಸಭಾ ಚುನಾವಣೆಯಲ್ಲಿ ಜಪ್ತಿ ಮಾಡದಷ್ಟು ಹಣ, ಹೆಂಡ, ಉಡುಗೊರೆ ಹಾಗೂ ಚಿನ್ನವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ.
ಜಪ್ತಿಯಾಗಿರುವ ನಗದು, ಮದ್ಯದ ಪೈಕಿ, 78 ಕೋಟಿ ರೂ ನಗದು, 177 ಕೋಟಿ ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಮದ್ಯ ಜಪ್ತಿ ಇದಾಗಿದೆ. ಈ ಮೂಲಕ ದೇಶದಲ್ಲಿಯೇ ಮದ್ಯ ಜಪ್ತಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಉಳಿದಂತೆ 11.21 ಕೋಟಿ ರೂ. ಮೌಲ್ಯದ ಮಾದಕ ವಸ್ತು, 8.14 ಕೋಟಿ ರೂ. ಮೌಲ್ಯದ ಉಡುಗೊರೆ, 59 ಕೋಟಿ ರೂ. ಮೌಲ್ಯದ ಬೆಳ್ಳಿ ಬಂಗಾರ ಹಾಗೂ ಡೈಮೆಂಡ್, 72 ಕೋಟಿ ರೂ.ಮೌಲ್ಯದ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ನೀತಿ ಸಂಹಿತೆ ಜಾರಿಯಾದಾಗಿನಿಂದ ಕೋಟ್ಯಂತರ ರೂಪಾಯಿ ಹಣ ಜೊತೆ ದೇಶದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಮದ್ಯ ವಶಪಡಿಸಿಕೊಂಡಿರುವುದು ದಾಖಲೆ ಸೃಷ್ಠಿಯಾಗಿದೆ. ಇದು ಚುನಾವಣಾ ಅಧಿಕಾರಿಗಳಿಗೂ ಅಚ್ಚರಿಯ ಸಂಗತಿಯಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…