ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ತಮ್ಮ ಸೋದರ ಡಿಕೆ ಸುರೇಶ್ ಪರ ಮತಪ್ರಚಾರ ಮಾಡುವ ವೇಳೆ ಅಪಾರ್ಟ್‌ಮೆಂಟ್ ಒಂದರ ಜನರ ಜತೆ ಸಭೆ ನಡೆಸಿ ಮಾತನಾಡಿದ್ದ ಡಿಕೆಶಿ ತನ್ನ ಸಹೋದರನಿಗೆ ಮತ ಹಾಕಿದರೆ ನಿಮ್ಮ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸುವುದಾಗಿ ಹೇಳಿದ್ದರು ಎಂದು ಬಿಜೆಪಿ ದೂರು ದಾಖಲಿಸಿತ್ತು.
ಈ ಕುರಿತಾಗಿ ಇದೀಗ ಹೈಕೋರ್ಟ್ ಆದೇಶ ನೀಡಿದ್ದು, ಡಿಕೆ ಶಿವಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಚುನಾವಣೆ ಭಾಷಣವನ್ನು ಆಮಿಷವೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಾಡಿದರು.
ಇನ್ನು ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ವಕೀಲ ಶರತ್ ದೊಡ್ಡವಾಡ್ ಡಿಕೆಶಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ವಾದ ಮಂಡಿಸಿದರು. ಇದನ್ನಾಲಿಸಿದ ಹೈಕೋರ್ಟ್ ಚುನಾವಣೆ ಪ್ರಚಾರದ ಗುಣಮಟ್ಟ ಕುಸಿತಕ್ಕೆ ಕಳವಳ ವ್ಯಕ್ತಪಡಿಸಿತು.
ಭಾಷಣದ ವೇಳೆ ಇದು ಪುನರಾವರ್ತನೆಯಾಗದಂತೆ ಎಚ್ಚರಿಸಿ ಎಂದು ಡಿಕೆಶಿ ಪರ ಹಿರಿಯ ವಕೀಲ ಉದಯ್ ಹೊಳ್ಳರಿಗೆ ಕೋರ್ಟ್ ಸೂಚನೆ ನೀಡಿತು. ಅಲ್ಲದೇ ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆಯನ್ನೂ ಸಹ ನ್ಯಾ.ಕೃಷ್ಣ ಎಸ್ ದೀಕ್ಷಿತ್ ಇದ್ದ ಪೀಠ ಇದೇ ವೇಳೆ ನೀಡಿತು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…