Mysore
26
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆ ಮತಯಾಚನೆ ಮಾಡುವ ವೇಳೆ ಮತದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರ್ ಆರ್‌ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಗಳೂರು ಗ್ರಾಮಾಂತರ‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್ ಪರ ಮತಯಾಚನೆ ಮಾಡುವ ವೇಳೆ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ ಆಧಾರದ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ.

ನಾನು ಇಲ್ಲಿಗೆ ವ್ಯಾವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್‌ಮೆಂಟ್‌ನಲ್ಲಿ 2510 ಮನೆಗಳಿದ್ದು, 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು ಸಂಪರ್ಕ ದೊರೆಯದಿರುವುದು. ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ, ನಿಮ್ಮ ಬೂತ್‌ ಆರ್‌ ಆರ್‌ ನಗರದಲ್ಲಿದೆ. 2 ರಿಂದ 3 ಬೂತ್‌ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್‌ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ ಎಂದು ಡಿಕೆ ಶಿವಕುಮಾರ್‌ ಹೇಳುತ್ತಿರುವ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿತ್ತು. ಈ ಹಿನ್ನಲೆ ದೂರು ದಾಖಲಾಗಿತ್ತು.

Tags:
error: Content is protected !!