ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆ ಮತಯಾಚನೆ ಮಾಡುವ ವೇಳೆ ಮತದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರ್ ಆರ್ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಮತಯಾಚನೆ ಮಾಡುವ ವೇಳೆ ಡಿಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.
ನಾನು ಇಲ್ಲಿಗೆ ವ್ಯಾವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್‌ಮೆಂಟ್‌ನಲ್ಲಿ 2510 ಮನೆಗಳಿದ್ದು, 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು ಸಂಪರ್ಕ ದೊರೆಯದಿರುವುದು. ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ, ನಿಮ್ಮ ಬೂತ್ ಆರ್ ಆರ್ ನಗರದಲ್ಲಿದೆ. 2 ರಿಂದ 3 ಬೂತ್‌ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ ಎಂದು ಡಿಕೆ ಶಿವಕುಮಾರ್ ಹೇಳುತ್ತಿರುವ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿತ್ತು. ಈ ಹಿನ್ನಲೆ ದೂರು ದಾಖಲಾಗಿತ್ತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…