ರಾಜ್ಯ

ಬಿಜೆಪಿ ಪ್ರಣಾಳಿಕೆಯಲ್ಲೂ ಚೊಂಬು ಕಾಣುತ್ತಿದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಭಾರತೀಯ ಜನತಾ ಪಕ್ಷವು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೊಂಬು ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಪೋಸ್ಟ್‌ ಹಂಚಿಕೊಂಡಿರುವ ಸಿದ್ದರಾಮಯ್ಯ ಕಳೆದ ಬಾರಿಯ ಬಿಜೆಪಿ ಪ್ರಣಾಳಿಕೆಯಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದೀರಿ ಎನ್ನುವ ಲೆಕ್ಕಚಾರವನ್ನು ದೇಶದ ಜನತೆಯ ಮುಂದಿಡಿ ಮೋದಿ ಅವರೇ ಎಂದು ಸವಾಲು ಹಾಕಿದ್ದಾರೆ.

ಮೋದಿ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಕಿಡಿಕಾರಿದ ಸಿದ್ದರಾಮಯ್ಯ, ನಾನು ನುಡಿದಂತೆ ನಡೆದವನು. ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಮಾಡಿದ ಕೆಲಸದ ಲೆಕ್ಕವನ್ನು ಜನರ ಮುಂದೆ ಇಟ್ಟಿದ್ದೆ. ಈ ಬಾರಿಯೂ ಈ ಕೆಲಸ ಮುಂದುವರೆಸುತ್ತಿದ್ದೇನೆ. ಈ ಕಾರಣಕ್ಕೆ ನರೇಂದ್ರ ಮೋದಿಯವರಲ್ಲಿ ಲೆಕ್ಕ ಕೇಳುವ ನೈತಿಕ ಅಧಿಕಾರ ನನಗಿದೆ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.

ಜುಮ್ಲಾ(ಮೋದಿ ಸುಳ್ಳು ಭರವಸೆ)1 ಎಂದು ಸರಣಿಗಳನ್ನು ಆರಂಭಿಸಿ ಬಿಜೆಪಿ ಪ್ರಣಾಳಿಕೆಗಳು ಎಷ್ಟು ಸುಳ್ಳಿನಿಂದ ಕೂಡಿದೆ ಎಂದು ಎಳೆ ಎಳೆಯಾಗಿ ಬರೆದುಕೊಂಡಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago