Mysore
29
scattered clouds

Social Media

ಭಾನುವಾರ, 19 ಏಪ್ರಿಲ 2026
Light
Dark

ಲೋಕಸಮರ 2024: ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು

ಚಿತ್ರದುರ್ಗ: ರಾಜ್ಯದಲ್ಲಿ ಇಂದು ( ಏಪ್ರಿಲ್‌ 26 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಕಡೆ ಶಾಂತಿಯುತ ಮತದಾನ ನಡೆದರೆ, ಇನ್ನೂ ಕೆಲವೆಡೆ ಗಲಾಟೆಗಳು ನಡೆದಿವೆ, ಮತಯಂತ್ರ ಕೈಕೊಟ್ಟ ಘಟನೆಗಳೂ ನಡೆದಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಯಶೋಧ ( 55 ) ಎಪಿಆರ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಯಶೋಧ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.

Tags:
error: Content is protected !!