ಚಿತ್ರದುರ್ಗ: ರಾಜ್ಯದಲ್ಲಿ ಇಂದು ( ಏಪ್ರಿಲ್ 26 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಹುತೇಕ ಕಡೆ ಶಾಂತಿಯುತ ಮತದಾನ ನಡೆದರೆ, ಇನ್ನೂ ಕೆಲವೆಡೆ ಗಲಾಟೆಗಳು ನಡೆದಿವೆ, ಮತಯಂತ್ರ ಕೈಕೊಟ್ಟ ಘಟನೆಗಳೂ ನಡೆದಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಯಶೋಧ ( 55 ) ಎಪಿಆರ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಯಶೋಧ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…