ರಾಜ್ಯ

ಲೋಕಸಭೆ ಚುನಾವಣೆ 2024: ವೋಟರ್‌ ಐಡಿ ಇಲ್ಲದಿದ್ದರೆ ಚಿಂತೆ ಬೇಡ ಈ ದಾಖಲೆಗಳ ಮೂಲಕವೂ ಮತದಾನ ಮಾಡಬಹುದು

ಮೈಸೂರು: ನಾಳೆ ( ಏಪ್ರಿಲ್‌ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ ಬಳಿಕ ಮತದಾನ ಕೇಂದ್ರಕ್ಕೆ ಬರುವವರಿಗೆ ಮತದಾನ ಮಾಡುವ ಅವಕಾಶವಿರುವುದಿಲ್ಲ. ಆದರೆ 6 ಗಂಟೆಯ ಒಳಗೆ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಮತದಾನ ಮಾಡುವ ಅವಕಾಶ ಇರಲಿದೆ.

ಇನ್ನು ಮತದಾನ ಮಾಡಲು ತೆರಳುವವರು ಕಡ್ಡಾಯವಾಗಿ ವೋಟರ್‌ ಐಡಿಯನ್ನೇ ತೆಗೆದುಕೊಂಡು ಬರಬೇಕೆಂಬ ನಿಯಮವೇನಿಲ್ಲ. ಪರ್ಯಾಯವಾಗಿ ಈ ಕೆಳಕಂಡ ದಾಖಲೆಗಳನ್ನು ತೋರಿಸಿ ಸಹ ಮತದಾರರು ತಮ್ಮ ಮತಗಳನ್ನು ಚಲಾಯಿಸಬಹುದಾಗಿದೆ.

* ಆಧಾರ್‌ ಕಾರ್ಡ್‌
* MNREGA ಜಾಬ್‌ಕಾರ್ಡ್‌
* ಬ್ಯಾಂಕ್‌ ಅಥವಾ ಪೋಸ್ಟ್‌ ಆಫೀಸ್‌ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌
* ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಚಾಲನಾ ಪರವಾನಗಿ
* ಪ್ಯಾನ್‌ ಕಾರ್ಡ್‌
* ಎನ್‌ಪಿಆರ್‌ ಅಡಿಯಲ್ಲಿ ಆರ್‌ಜಿಐ ನೀಡಿದ ಸ್ಮಾರ್ಟ್‌ಕಾರ್ಡ್‌, ಭಾರತೀಯ ಪಾಸ್‌ಪೋರ್ಟ್‌
* ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ
* ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಪಿಎಸ್‌ಯು ಅಥವಾ ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
* ಎಂಪಿಗಳು ಅಥವಾ ಎಂಎಲ್‌ಎಗಳು ಅಥವಾ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
* ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಐಡಿ ( ಯುಐಐಡಿ ) ಕಾರ್ಡ್‌

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

50 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

1 hour ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

1 hour ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

2 hours ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago