ಬೆಂಗಳೂರು:ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಆಕ್ರಮ ಆಸ್ತಿಗಳಿಗೆ ಅಧಿಕಾರಿಗಳಿಗೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸ್ ಬಿಸಿ ಮುಟ್ಟಿಸಿದ್ದು, ರಾಜ್ಯದ ವಿವಿಧ ಹಂತದ ೧೩ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ೧೩ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟ ೬೦ ಕಡೆ ಶೋಧ ನಡೆಯುತ್ತಿದೆ.
ಬೆಂಗಳೂರು, ಮೈಸೂರು, ರಾಮನಗರ, ಬೀದರ್, ಉಡುಪಿ, ಕಾರವಾರ, ಕೊಡಗು, ಉತ್ತರ ಕನ್ನಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಅಧಿಕಾರಿಗಳ ಅಕ್ರಮ ಆಸ್ತಿ, ಸೋತ್ತುಗಳಿಗಾಗಿ ಹುಡುಕಾಟ ನಡೆಯುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಕಿರಿಯ ಎಂಜಿನಿಯರ್ ಪ್ರಕಾಶ್, ಮೈಸೂರಿನ ಸಹಾಯಕ ಇಂಜಿನಿಯರ್ ಫಯಾಝ್ ಅಹಮ್ಮದ್, ಬಿಬಿಎಂಪಿ ವಲಯದ ಮುಖ್ಯ ಎಂಜಿನಿಯರ್ ರಂಗನಾಥ್, ಎಸ್,ಪಿ, ಅಬಕಾರಿ ಇಲಾಖೆಯ ಉಡುಪಿ ಉಪ ಆಯುಕ್ತೆ ರೂಪಾ, ಕೊಡಗು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿವಣಾ ಅಧಿಕಾರಿ ಜಯಣ್ಣ ಬಿ.ವಿ, ಬಿಡಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಯತೀಶ್, ಧಾರವಾಡದ ವಲಯ ಅರಣ್ಯ ಅಧಿಕಾರಿ ಮಹೇಶ್ ಚಂದ್ರಯ್ಯ ಹಿರೇಮಠ, ಬೀದರ್‌ನ ಕಾರ್ಯನಿರರ್ವಹಕ ಎಂಜಿನಿಯರ್ ಶಿವಕುಮಾರ ಸ್ವಾಮಿ, ಕೋಲಾರದ ಸಹಾಯಕ ನಿರ್ದೇಶಕ ನಾಗರಾಜಪ್ಪ, ವಿಜಯಪುರದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಖಪ್ಪ, ಚಿಕ್ಕಬಳ್ಳಾಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸದಾಶಿವಯ್ಯ, ಮಳವಳ್ಳಿ ತಾಲ್ಲೂಕಿನ ಅಗಸಪುರ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ ಕೃಷ್ಣೇಗೌಡ, ಬೆಳಗಾವಿ ಜಿಲ್ಲೆಯ ನಿಡಗುಂದಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸದಾಶಿವ ಜಯಪ್ಪ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
೧೩ ಎಸ್‌ಪಿ, ೧೨ ಡಿವೈಎಸ್‌ಪಿ, ೨೫ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ೧೩೦ ಸೇರಿದಂತೆ ೧೩೦ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…